ಬೆಳಿಗ್ಗೆ ಹನ್ನೊಂದರ ಸಮಯ. ಪ್ರತಿನಿತ್ಯ ಬರುವ ಬಸ್ ಅಂದು ನಾನು ಬರುವ ಹೊತ್ತಿಗೆ ಹೋಗಿಬಿಟ್ಟಿತು. ಬಸ್ ನಿಲ್ದಾಣದಲ್ಲಿ ಕಾಯುತ್ತಾ ಕುಳಿತಿದ್ದೆ. ಐವತ್ತು ದಾಟಿದ ಮನುಷ್ಯ ಪಕ್ಕದಲ್ಲೇ ಬಂದು ಕುಳಿತ. ತಲೆಕೂದಲು ಬೆಳ್ಳಿಯಂತೆ ಫಳಫಳ ಎಂದು ಹೊಳೆಯುತ್ತಿತ್ತು. ನೋಡಿದ ತಕ್ಷಣ ಈ ಅಸಾಮಿ ನಮ್ಮ ದೇಶದನಲ್ಲ ಎಂದು ಗೊತ್ತಾಗುತ್ತಿತ್ತು.
ನಾನು ಸುಮ್ಮನಿದ್ದರೂ ಆತನೇ ಮಾತಿಗೆಳೆದ. "ನಾನು ಶಿವಾಜಿನಗರಕ್ಕೆ ಹೋಗಬೇಕು. ಯಾವ ಬಸ್ನಲ್ಲಿ ಹೋಗಬಹುದು?'' ಎಂದು ಇಂಗ್ಲಿಷ್ನಲ್ಲಿ ಕೇಳಿದ. "ನೀವು ಎರಡು ಬಸ್ ಬದಲಾಯಿಸಬೇಕು. ಇಲ್ಲಿಂದ ನೇರವಾಗಿ ಅಲ್ಲಿಗೆ ಬಸ್ ಇಲ್ಲ'' ಎಂದು
ಅವನಿಗೆ ಬಸ್ಗಳ ನಂಬರ್ ಕೂಡ ಕೊಟ್ಟೆ. ಏಳೆಂಟು ಬಸ್ ಗಳ ನಂಬರನ್ನು ಪುಟ್ಟ ಡೈರಿಯಲ್ಲಿ ನೀಟಾಗಿ ಬರೆದಿಟ್ಟುಕೊಂಡ. ಡೈರಿಯನ್ನು ಜೇಬಿಗಿಳಿಸಿಕೊಂಡು "ಥ್ಯಾಂಕ್ಸ್'' ಅಂದು "ಭಾರತೀಯರು ಎಲ್ಲೇ ಹೋದರೂ ಸುಳ್ಳು ಹೇಳಲ್ಲ, ಹೆಮ್ಮೆಯಾಗುತ್ತದೆ'' ಎಂದು ಖುಷಿಯಿಂದ ಹೇಳಿದ. ಜೊತೆಗೆ ಒಂದು ದಿನ ಮುಂಚೆ ಆತ ದೇವನಹಳ್ಳಿ ವಿಮಾನ ನಿಲ್ದಾಣದಿಂದ ಬರುವಾಗ ದಾರಿ ಗೊತ್ತಾಗದೆ ಪರದಾಡಿದ್ದು, ಆಟೋದವನು ಮಾಡಿದ ಸಹಾಯವನ್ನೂ ನೆನಪಿಸಿಕೊಂಡ.
‘ನೀನು ಭಾರತಕ್ಕೆ ಏಕೆ ಭೇಟಿ ಮಾಡಿರುವೆ?' ಎಂದು ಕೇಳಿದೆ. ನನ್ನ ಪ್ರಶ್ನೆ ಕೊನೆಯಾಗುವ ಮೊದಲೇ ಆತ ಉತ್ತರ ಹೇಳಲು ಶುರುಮಾಡಿದ್ದ. "ನನ್ನ ಹೆಸರು ಸ್ಯಾಮ್. ಯುಎಸ್ಎನಿಂದ ಬಂದಿದ್ದೇನೆ. ಭಾರತಕ್ಕೆ ಇದೇ ಮೊದಲು ಬಂದಿರುವೆ. ಭಾರತ ಸಾಂಸ್ಕೃತಿಕವಾಗಿ ಬಹಳಷ್ಟು ವೈವಿಧ್ಯ ಇರುವ ದೇಶ ಎಂದು ಕೇಳಿದ್ದೆ. ಇತ್ತೀಚೆಗೆ ಒಂದು ಬಾರಿ ಭಾರತದ ಕನಸು ಬಿತ್ತು. ಅದರಲ್ಲೂ ಬೆಂಗಳೂರು ನಗರಕ್ಕೆ ನಾನು ಬಂದಿಳಿದ ಹಾಗೆ ಕನಸು ಬಿತ್ತು. ಹಾಗಾಗಿ, ನನಗೆ ಇಲ್ಲಿಗೆ ಬಂದು ನೋಡಲೇಬೇಕು ಎಂದು ಡಿಸೈಡ್ ಮಾಡಿದೆ'' ಎಂದು ಬಹಳ ಖುಷಿಯಿಂದ ನಗುನಗುತ್ತಲೇ ಹೇಳಿಕೊಂಡ. ನನಗೆ ಅಚ್ಚರಿಯಾಯಿತು. ಕೇವಲ ''ಒಂದು ಕನಸಿನಿಂದಾಗಿ'' ಆತ ಅದೆಷ್ಟೋ ಡಾಲರ್ ಖರ್ಚು ಮಾಡಿ ಭಾರತವನ್ನು ನೋಡಲು ಬಂದ!. ನಾಳಿನ ಬಗ್ಗೆ ಯೋಚನೆ ಮಾಡದೆ ಈ ಕ್ಷಣದ ಜೀವನವನ್ನು ಖುಷಿಯಿಂದ ಕಳೆಯುವುದೆಂದರೆ ಇದೇನಾ ಅನಿಸಿತ್ತು. ಸಣ್ಣದೊಂದು ನಗುವಿನೊಂದಿಗೆ ಆತನಿಗೆ ಮನಸ್ಸಿನಲ್ಲೇ ಸಲಾಂ ಎಂದೆ

3 comments:
ಇವರು ಜೀವನವನ್ನು ಸಾಹಸದಿಂದ, ಉಮೇದಿಯಿಂದ ಕಳೆಯೋ ಜನರು. ಆ ರೀತಿ ಕಳೆಯಲು ಬೇಕಾಗುವಷ್ಟು ಹಣವೂ ಇವರಲ್ಲಿ ಇರುತ್ತದೆ, ಬಿಡಿ!
ಕನಸೆಂಬ ಕುದುರೆಯನೇರಿ.... :)
ಅಮೇರಿಕಾದವರಿಗೆ ಇಂಡಿಯಾ ವೀಸಾ ಸಿಗೋದು ತುಂಬಾ ಸುಲುಭ..
ಅದೇ ನಮಗೆ US visa ಸಿಗೋದು ತುಂಬಾ ಕಷ್ಟ...
:(
ಇವರು ನಿಜಕ್ಕೂ ಸಾಹಸಿಗಳು.ಹೋದ ವರ್ಷ ಇಡೀ ಪಶ್ಚಿಮ ಘಟ್ಟವನ್ನು ಮೂರು ತಿಂಗಳು ಬರೀ ಕಾಲ್ನಡಿಗೆಯಿಂದಲೇ ಕ್ರಮಿಸಿದ ಫ್ರೆಂಚ್ ದಂಪತಿಗಳಿಬ್ಬರು ಜೋಗದಲ್ಲಿ ಭೇಟಿಯಾಗಿದ್ದರು.ಇದನ್ನು ನಾವು ಕನಸಿನಲ್ಲೂ ಊಹಿಸುವುದಿಲ್ಲ.ನನ್ನ ಬ್ಲಾಗಿಗೂ ಭೇಟಿ ಕೊಡಿ.ನಮಸ್ಕಾರ.
Post a Comment